ಮಡಿಕೇರಿ, ಫೆ.22 : ಮಡಿಕೇರಿ ಲೋಕಾಯುಕ್ತ ಅಧಿಕಾರಿ ಅವರು ತಾ. 25 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ, ತಾ. 26 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ, ತಾ. 27 ರಂದು ನಗರದ ಗೌಳಿಬೀದಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ದೂರವಾಣಿ ಸಂಖ್ಯೆ 08272-220797 ನ್ನು ಸಂಪಕಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.