ಸೋಮವಾರಪೇಟೆ,ಫೆ.22: ಬೆಳೆಗಾರರು ತಮ್ಮ ಜಮೀನಿನಲ್ಲಿ ನೀರಾವರಿಗಾಗಿ ಅಳವಡಿಸಿರುವ ಪಂಪ್‍ಸೆಂಟ್‍ಗಳಿಗೆ ಕಲ್ಪಿಸಲಾಗಿದ್ದ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತಿರುವ ಸೆಸ್ಕ್ ಕಾರ್ಯವೈಖರಿಯನ್ನು ಖಂಡಿಸಿ ತಾ. 25ರಂದು ಬೆಳೆಗಾರರ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಗೆ ಜಯಕರ್ನಾಟಕ ಸಂಘಟನೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವದಾಗಿ ಅಧ್ಯಕ್ಷ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.