ನಾಪೋಕ್ಲು, ಫೆ. 22: ಸಮೀಪದ ವೆಸ್ಟ್ ಕೊಳಕೇರಿ ಗ್ರಾಮದ ಶ್ರೀ ಭಗವತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀ ಭಗವತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನೀಲೇಶ್ವರದ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ತಾ. 16 ರಿಂದ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಬಳಿಕ ದೇವರ ನೃತ್ಯಬಲಿ ಉತ್ಸವ ಜರುಗಿತು. ಪೂಜೋತ್ಸವದ ಅಂಗವಾಗಿ ಭಕ್ತಾಧಿಗಳಿಗೆ ಉಪಹಾರ ಹಾಗೂ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವತಾ ಕಾರ್ಯದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪುನೀತರಾದರು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ, ಸಮಿತಿಯ ಪದಾಧಿಕಾರಿಗಳು, ಅರ್ಚಕರಾದ ಸೀತಾರಾಂ ಭಟ್ ಸೇರಿದಂತೆ ಮತ್ತೀತರರು ಹಾಜರಿದ್ದರು.