ಕೂಡಿಗೆ, ಫೆ. 23: ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೂಡಿಗೆ, ಹೆಬ್ಬಾಲೆ, ಗೋಣಿಮರೂರು ಕ್ಲಸ್ಟರ್ ವಲಯದ ಶಿಕ್ಷಕರ ಸಮಾಲೋಚನಾ ಸಭೆ ನಡೆಯಿತು.

ಸಭೆಯನ್ನು ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್ ಉದ್ಘಾಟಿಸಿ, ಮಾತನಾಡಿ, ಶಾಲಾ ದಾಖಲಾತಿ ಹೆಚ್ಚಿಸುವದರ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭ ಸಂಪನ್ಮೂಲ ವ್ಯಕ್ತಿಗಳಾಗಿ ನಲಿಕಲಿ ಶಿಕ್ಷಕ ಹರೀಶ್ ನಲಿಕಲಿಯ ಬಗ್ಗೆ ಸಮರ್ಪಕ ಮಾಹಿತಿ ನೀಡಿದರು. ಡಿಆರ್‍ಪಿ ಲೋಕೇಶ್ ಶಾಲೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಸೂಯ ವಹಿಸಿದ್ದರು. ಸಭೆಯಲ್ಲಿ ಕೂಡಿಗೆ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಬಿ.ಸಿ. ರಾಜು, ಸಿ.ಆರ್.ಪಿ.ಗಳಾದ ಗಿರೀಶ್, ಮುಬಿನಾ ಸೇರಿದಂತೆ ಮೂರು ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು ಇದ್ದರು.