ಮಡಿಕೇರಿ, ಫೆ. 23: ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಬಾಲಕಿಯರಿಗೆ ಆತ್ಮ ರಕ್ಷಣಾ ತರಬೇತಿ ಶಿಬಿರವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತಾ. 25 ರಿಂದ ಮಾರ್ಚ್ 11 ರವರೆಗೆ ಏರ್ಪಡಿಸಲಾಗಿದೆ. ಜಿಲ್ಲೆಯ ಆಸಕ್ತ ಬಾಲಕಿಯುರು ಹೆಚ್ಚಿನ ಮಾಹಿತಿಗೆ ದೂ. 08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.