ಮಡಿಕೇರಿ, ಫೆ. 22: ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಶರತ್ ಚಂದ್ರ ಅವರು ವರ್ಗಾವಣೆಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೊಡಗು ಸೇರಿದಂತೆ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಯ ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕರಾಗಿ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾಗಿದ್ದ ವಿಪುಲ್‍ಕುಮಾರ್ ಅವರನ್ನು ನಿಯೋಜಿಸಲಾಗಿದೆ.