ಮಡಿಕೇರಿ, ಫೆ. 23: ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ಆತ್ಮಾಹುತಿ ಧಾಳಿಗೆ ಬಲಿಯಾದ ಭಾರತೀಯ ವೀರ ಸೈನಿಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಉಗ್ರರ ಧಾಳಿಗೆ ಹುತಾತ್ಮರಾದ ವೀರ ಯೋಧರಿಗೆ ಸಂಸ್ಥೆಯ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪ್ರಧಾನ ಆಯುಕ್ತ ಕಂಬೀರಂಡ ಕಿಟ್ಟು ಕಾಳಪ್ಪ, ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಮೂರು ತಾಲೂಕಿನ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.