ಮಡಿಕೇರಿ, ಫೆ. 25: ಕೊಡಗು ಜಿಲ್ಲೆಯಲ್ಲಿನ ಕೊಡವ ಜನಾಂಗದ ಕುಲಶಾಸ್ತ್ರೀಯ ಅಧ್ಯಯನವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ವತಿಯಿಂದ ಕೈಗೊಳ್ಳಲಾಗಿದೆ. ಈ ಅಧ್ಯಯನ ಕಾರ್ಯಕ್ಕೆ ಪೂರಕವಾಗಿ ಕೊಡಗು ಜಿಲ್ಲೆಯಲ್ಲಿನ ಕೊಡವ ಜನಾಂಗದವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ನಿಖರ ಮಾಹಿತಿ ಪಡೆಯಲು ಸಂಸ್ಥೆಯ ಮಾಹಿತಿ ಸಂಗ್ರಹಕಾರರು ಜಿಲ್ಲೆಯಾದ್ಯಂತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸಂಸ್ಥೆಯ ಮಾಹಿತಿ ಸಂಗ್ರಹಕಾರರು ಜಿಲ್ಲೆಯಲ್ಲಿ ಸಮೀಕ್ಷೆ ಮಾಡಿ ಕೊಡವ ಜನಾಂಗದವರನ್ನು ಸಂಪರ್ಕಿಸಿ, ಮಾಹಿತಿ ಸಂಗ್ರಹಿಸಲು ಮನೆ ಮನೆಗೆ ತೆರಳುವಂತಹ ಸಂದರ್ಭದಲ್ಲಿ ಇವರಿಗೆ ನಿಖರವಾದ ಮಹಿತಿ ಒದಗಿಸಿ, ಸಂಪೂರ್ಣ ಸಹಕಾರ ನೀಡಿ ಅಧ್ಯಯನ ಕಾರ್ಯಕ್ಕೆ ಅನುಕೂಲ ಮಾಡಿಕೊಡಬೇಕಾಗಿ ಜನಾಂಗದವರಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಕೋರಿದ್ದಾರೆ.