ಗೋಣಿಕೊಪ್ಪಲು, ಫೆ. 25: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದಿಂದ ಇತ್ತೀಚೆಗೆ ಭಯೋತ್ಪಾದಕರ ಬಾಂಬ್ ಧಾಳಿಯಲ್ಲಿ ಮೃತಪಟ್ಟ ಯೋಧರ ಮತ್ತು ಕನ್ನಡದ ಹಿರಿಯ ಸಾಹಿತಿ, ವಿಜಯಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಕೊ. ಚನ್ನಬಸಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆಯನ್ನು ತಾ. 27 ಮಧ್ಯಾಹ್ನ 3 ಗಂಟೆಗೆ ಕೊಡಗು ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ.