ಯುದ್ಧ ಸ್ಮಾರಕ ಲೋಕಾರ್ಪಣೆ

ನವದೆಹಲಿ, ಫೆ.25 : ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯೋಧರನ್ನು ಕಡೆಗಣಿಸಿತ್ತು. ಆದರೆ ಆರು ದಶಕಗಳ ನಂತರ ಹುತಾತ್ಮ ಯೋಧರನ್ನು ಸ್ಮರಿಸುತ್ತಿದ್ದೇವೆ. ಪ್ರತಿಯೊಬ್ಬ ಯೋಧರ ಹೆಸರುಗಳನ್ನು ಈ ಯುದ್ಧ ಸ್ಮಾರಕದಲ್ಲಿ ಕೆತ್ತಿಸಲಾಗಿದೆ ಎಂದರು. ಈ ಸ್ಮಾರಕ ಯುವಕರಿಗೆ ಸ್ಪೂರ್ತಿಯಾಗಲಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆಗೊಂಡ ನಂತರ ಸೇನೆಗೆ ಸೇರಲು ಯುವಕರು ಹೆಚ್ಚು ಒಲವು ತೋರಲಿದ್ದಾರೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಯೋಧರಿಗೆ ಮೊದಲ ಆದ್ಯತೆ ನೀಡಿದೆ. ಹಲವು ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಏಕ ಶ್ರೇಣಿ-ಏಕ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಯೋಧರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇವೆ ಎಂದರು. ಏಕ ಶ್ರೇಣಿ - ಏಕ ಪಿಂಚಣಿ ಯೋಜನೆಗೆ 53 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ ಎಂದ ಪ್ರಧಾನಿ ಸ್ಪಷ್ಟಪಡಿಸಿದರು.

ಹೆಲಿಕಾಫ್ಟರ್ ಬಳಸಿ ಅಗ್ನಿ ನಿಯಂತ್ರಣ

ಬೆಂಗಳೂರು, ಫೆ.25 : ಕೆಲ ದಿನಗಳಿಂದ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಬೆಂಕಿಯ ನರ್ತನ ಜೋರಾಗಿದ್ದು ಸರಿಸುಮಾರು 10 ಸಾವಿರ ಎಕರೆ ಅರಣ್ಯ ಜಮೀನು ಬೆಂಕಿಗೆ ಆಹುತಿಯಾಗಿದೆ. ಇದೀಗ ಎಚ್ಚೆತ್ತ ಸರ್ಕಾರ ಹೆಲಿಕಾಫ್ಟರ್ ಬಳಿಸಿ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆ ಶುರುವಾಗಿದ್ದರಿಂದ ಕಾಡಿನಲ್ಲಿ ಮರದ ಎಲೆಗಳು ಒಣಗಿರುವದರಿಂದ ಬೆಂಕಿ ಜ್ವಾಲೆ ಅರಣ್ಯದಾದ್ಯಂತ ಪಸರಿಸುತ್ತಿದೆ. ಇನ್ನು ತಮಿಳುನಾಡಿನ ಮುದುಮಲೈ ಅರಣ್ಯಕ್ಕೂ ಬೆಂಕಿ ಪರರಿಸಿರುವದರಿಂದ ಸುಮಾರು 40 ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಕೆನ್ನಾಲಿಗೆಯನ್ನು ಹಾರಿಸಲು ಅಗ್ನಿಶಾಮಕ ಸಿಬ್ಬಂದಿ ಸತತ ಪ್ರಯತ್ನದಲ್ಲಿ ತೊಡಗಿದ್ದು ಇದಕ್ಕಾಗಿ 10 ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಬೆಂಕಿ ನಂದಿಸುವ ಪ್ರಯತ್ನ ನಿರೀಕ್ಷಿತ ಫಲಕೊಟ್ಟಿಲ್ಲ ಈಗ ಪಕ್ಕದ ನುಗು ಮತ್ತು ತಾರಕ ಜಲಾಶಗಳಿಂದ ಹೆಲಿಕಾಪ್ಟರ್ ಗಳ ಮೂಲಕ ನೀರು ತಂದು ಬೆಂಕಿಯನ್ನು ನಂದಿಸುವ ಕೆಲಸ ಮಾಡಲು ತೀರ್ಮಾನ ಮಾಡಲಾಗಿದೆ ಇದಕ್ಕಾಗಿ ಸೇನೆ ಹೆಲಿಕಾಪ್ಟರ್ ಬಳಕೆ ಮಾಡಿ ಬೆಂಕಿಯನ್ನು ನಿಯಂತ್ರಣ ಮಾಡುವ ಮಾಡುವ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.