ವೀರಾಜಪೇಟೆ, ಫೆ. 25: ಗ್ರಾಮ ಪಂಚಾಯಿತಿಗೆ ಸರ್ಕಾರದ ಅನುದಾನಗಳ ಸದ್ಭಳಕೆ ಮತ್ತು ಜನಹಿತ ಕೆಲಸ ಮಾಡಿ ವರ್ಗವಾಗಿರುವ ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ ಅವರನ್ನು ಪಂಚಾಯಿತಿಯು ಸನ್ಮಾನಿಸಿತು.
ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸತತ ನಾಲ್ಕು ವರ್ಷಗಳಿಂದ ಸೇವೆ ಮಾಡುತ್ತಾ ವರ್ಗಾವಣೆಗೊಂಡ ಅಧಿಕಾರಿ ಕೆ.ಪಿ. ಸುಬ್ಬಯ್ಯ ಅವರನ್ನು ಪಂಚಾಯಿತಿ ಸರ್ವ ಸದಸ್ಯರ ಸಮ್ಮುಖದಲ್ಲಿ ಸನ್ಮಾನಿಸಿತು. ಗ್ರಾಮ ಪಂಚಾಯಿತಿಗೆ ಹೆಚ್ಚುವರಿ ಅಧಿಕಾರಿಯಾಗಿ ನಿಯುಕ್ತಿಗೊಂಡ ಬಿಳುಗುಂದ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಪ್ರಮೋದ್ ಅವರು ಸ್ವಾಗತಿಸಿದರು. ಸಮಾರಂಭದಲ್ಲಿ ಪಂಚಾಯಿತಿಯ ಅಧ್ಯಕ್ಷರು ಸೇರಿದಂತೆ ಸದಸ್ಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿ ಹಾಜರಿದ್ದರು.