ಸಿದ್ದಾಪುರ, ಫೆ. 25: ಪಕ್ಷದ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ ತಿಳಿಸಿದರು. ಸಿದ್ದಾಪುರದ ಪಂಚಾಯಿತಿ ಸಭಾಂಗಣದಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯು ಸಮೀಪಿಸುತ್ತಿದ್ದು, ಕಾರ್ಯಕರ್ತರು ಭಿನ್ನಾಭಿಪ್ರಾಯ ಬಿಟ್ಟು ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸಬೇಕೆಂದು ಕರೆ ನೀಡಿದರು.
ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಪಕ್ಷದ ಸ್ಥಳೀಯ ಮುಖಂಡರುಗಳು ಕಾರ್ಯಕರ್ತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಪಕ್ಷದಲ್ಲಿನ ಅಸಮಾದಾನವನ್ನು ಬಗೆಹರಿಸಿ ಪಕ್ಷದ ಸಂಘಟನೆಗೆ ಒತ್ತುಕೊಡಬೇಕೆಂದರು. ಅಲ್ಲದೆ ಸಿದ್ದಾಪುರ ಕಾಂಗ್ರೆಸ್ ಭದ್ರಕೋಟೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪಧಾದಿಕಾರಿಗಳಾದ ಉಸ್ಮಾನ್ ಹಾಜಿ, ಜೋಸೆಫ್ ಶ್ಯಾಮ್, ಎಂ.ಎಸ್. ವೆಂಕಟೇಶ್, ಮೂಸ ಇನ್ನಿತರರು ಹಾಜರಿದ್ದರು.