ಸಚಿವ ಸಂಪುಟ ಅಸ್ತು ಮಡಿಕೇರಿ, ಫೆ. 25: ಬಹುದಿನಗಳ ಬೇಡಿಕೆಯಾಗಿದ್ದ ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲೂಕು ರಚನೆಯ ಕೂಗಿಗೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲೂಕು ರಚನೆಗೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ತಾ. 28 ರಂದು ಕೊಡಗಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ‘ಶಕ್ತಿ’ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.