ಮಡಿಕೇರಿ, ಫೆ. 25: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮತದಾರರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಬದಲಾವಣೆಗಾಗಿ ಮತ ಚಲಾಯಿಸಿ, ಯುವ ಜನತೆಯ ಮತದಾನ, ಸುಭದ್ರ ಭಾರತದ ನಿರ್ಮಾಣ ಇತ್ಯಾದಿ ಘೋಷಣೆಗಳೊಂದಿಗೆ ಜಾಥಾವನ್ನು ನಡೆಸಲಾಯಿತು. ಜಾಥಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.