ಮಡಿಕೇರಿ, ಫೆ. 24: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರ್ರಯದಲ್ಲಿ ತಾ. 26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು, ವರದಿಗಾರರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಕಾರ್ಯಾಗಾರ ನಡೆಯಲಿದೆ.
ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯಾ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷೆ ಸವಿತಾ ರೈ, ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.