ಮಡಿಕೇರಿ, ಫೆ. 25: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಧಾಳಿಯಿಂದ ಹುತಾತ್ಮರಾದ ಭಾರತೀಯ ವೀರಯೋಧರಿಗೆ ಮೇಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮುಂಬತ್ತಿ ಬೆಳಗಿ ಮೌನಾಚರಣೆಯ ಮೂಲಕ ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಿದರು. ಗ್ರಾ.ಪಂ. ಅಧ್ಯಕ್ಷೆ ಜಯಂತಿ, ಮಾಜಿ ಸೈನಿಕ ಚೋಂಡೀರ ಕಾರ್ಯಪ್ಪ, ಎಸ್‍ಡಿಎಂಸಿ ಅಧ್ಯಕ್ಷ ರಫೀಕ್ ಹಾಗೂ ಗ್ರಾ.ಪಂ. ಸದಸ್ಯರು, ಎಸ್‍ಡಿಎಂಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಸಂತಾಪ ಸೂಚಿಸಿದರು.