ಒಡೆಯನಪುರ, ಫೆ. 24: ಪೋಷಕರು ಮಕ್ಕಳ ಮನಸನ್ನು ಅರ್ಥ ಮಾಡಿಕೊಂಡು ಮತ್ತು ಮಕ್ಕಳಿಗೆ ಸಂಸ್ಕಾರ ಗುಣಗಳನ್ನು ಕಲಿಸಿಕೊಟ್ಟು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತದೆ ಎಂದು ಹಾಸನದ ಅಂತರರಾಷ್ಟ್ರೀಯ ನಾಟ್ಯ ವಿಧೂಷ ಉನ್ನತ್ ಜೈನ್ ಅಭಿಪ್ರಾಯಪಟ್ಟರು.

ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಂದೆ-ತಾಯಿಂದಿರು ಮಕ್ಳಳ ಮನಸನ್ನು ಅರ್ಥ ಮಾಡಿಕೊಳ್ಳದಿದ್ದಲ್ಲಿ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಮಕ್ಕಳ ಮನಸು ತನ್ನದೆ ಆದ ಗುಂಗನ್ನು ಒಳಗೊಂಡಿರುತ್ತದೆ ಇದು ಮಕ್ಕಳ ಸ್ವಭಾವ, ಇಂತಹ ಸಂದರ್ಭದಲ್ಲಿ ಮಕ್ಕಳ ಮೇಲೆ ಉತ್ತಡ ಹೇರಬಾರದು. ಮಕ್ಕಳ ಮನಸಿನಲ್ಲಿ ಏನೀದೆ ಎಂಬದನ್ನು ಅರ್ಥ ಮಾಡಿಕೊಂಡು ಪೋಷಿಸಬೇಕಾಗುತ್ತದೆ ಎಂದರು. ಸಕಲೇಶಪುರದ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಬೆಟ್ಟೇಗೌಡ ಮಾತನಾಡಿ,ಪೋಷಕರು ತಮ್ಮ ಮಕ್ಕಳಿಗೆ ದೇಶಾಭಿಮಾನ ಮತ್ತು ರಾಷ್ಟ್ರವನ್ನು ರಕ್ಷಣೆ ಮಾಡುತ್ತಿರುವ ಸೈನಿಕರ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವ ಸಲುವಾಗಿ ಮನವರಿಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಅಧ್ಯಕ್ಷೆ ಡಿ. ಸುಜಲಾದೇವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎನ್.ಟಿ. ಗುರುಪ್ರಸಾದ್ ಹಾಜರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಲರವ ನಡೆಯಿತು.