ಸುಂಟಿಕೊಪ, ಫೆ. 26: ಇಲ್ಲಿಗೆ ಸಮೀಪದ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೂ. 23 ಲಕ್ಷ ವೆಚ್ಚದ ನೂತನ ವಾಣಿಜ್ಯ ಮಳಿಗೆ ನಿರ್ಮಿಸಲಾಗಿದ್ದು, ಶಾಸಕರಾದ ಎಂ.ಪಿ. ಅಪ್ಪಚು ರಂಜನ್ ತಾ. 27 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎ. ಮೊಣ್ಣಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಬಿ.ಡಿ. ಮಂಜುನಾಥ್ ಆಗಮಿಸಲಿದ್ದಾರೆ.