ನಾಪೋಕ್ಲು, ಫೆ. 26: ಸಮೀಪದ ಕಕ್ಕಬ್ಬೆ ಇಗ್ಗುತ್ತಪ್ಪ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬೆಟ್ಟಕ್ಕೆ ವ್ಯಾಪಿಸಿದೆ. ನೂರಕ್ಕೂ ಅಧಿಕ ಎಕರೆ ಬೆಟ್ಟ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.