ಮಡಿಕೇರಿ, ಫೆ. 26: ಮೂರ್ನಾಡುವಿನ ಅನ್ನಪೂರ್ಣೇಶ್ವರಿ ಯುವತಿ ಮಂಡಳಿಯ ಕಾವ್ಯಶ್ರೀಗೆ ಜಿಲ್ಲಾಮಟ್ಟದ ಯುವ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕಾವ್ಯಶ್ರೀ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದ ಯುವ ಜನೋತ್ಸವಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸ್ಪಚ್ಛತೆ, ಸಾಮಾಜಿಕ ಕಳಕಳಿ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ. ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.