ಕುಶಾಲನಗರ, ಫೆ. 26: ಆರೋಗ್ಯ, ಸ್ವಚ್ಛತೆ, ನೈರ್ಮಲ್ಯಕ್ಕೆ ಪ್ರಥಮ ಆದ್ಯತೆ ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿನ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ತನ್ನ ಪರಿಸರದ ರಕ್ಷಣಾ ಜವಾಬ್ದಾರಿ ಮರೆತಿರುವದು ಆತಂಕ ವಿಷಯ. ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ಕೊಡುವ ಮನುಷ್ಯ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯ ಕಡೆಗೆ ಗಮನಹರಿಸದಿರು ವದು ವಿಷಾದ ನೀಯ. ಸ್ವಚ್ಛತೆ ಎಂಬದು ಸೇವೆ ಮತ್ತು ಇದು ನಮ್ಮ ಆದ್ಯ ಕರ್ತವ್ಯ ಕೂಡ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಬಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್ ಮಾತನಾಡಿ, ನೀರಿನ ಮಿತ ಬಳಕೆ ಮಾಡಬೇಕು ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚು ಒತ್ತು ಕೊಡಬೇಕಾಗಿದೆ. ಪ್ರಕೃತಿಯು ಮನುಷ್ಯನಿಗೆ ಎಲ್ಲವನ್ನೂ ನೀಡಿದೆ. ನಾವು ಪ್ರಕೃತಿಯನ್ನು ಸಂರಕ್ಷಣೆ ಮಾಡುವ ಮೂಲಕ ಕೊಡುಗೆ ನೀಡಬೇಕು ಎಂದರು. ಸ್ವಚ್ಛತಾ ಅಭಿಯಾನದ ಸಂಚಾಲಕ ಡಾ. ಟಿ. ಕೇಶವಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ದಲ್ಲಿ ಎನ್‍ಎಸ್‍ಎಸ್ ಸಂಚಾಲಕ ಡಾ. ಚಂದ್ರಶೇಖರ ಜಿ. ಜೋಷಿ, ಎಸ್‍ಸಿ-ಎಸ್ಟಿ ಕೋಶದ ಸಂಚಾಲಕ ರಾಜಕುಮಾರ್ ಮೇಟಿ, ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಶ್ರೀನಾಥ್, ಪ್ರಾಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.