ಮಡಿಕೇರಿ, ಫೆ. 26: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಪ್ರಾರಂಭವಾಗುತ್ತಿದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ.ರಾ.ರ.ಸಾ. ನಿಗಮವು ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ತಾ. 5 ರಿಂದ 18ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸ ಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜ್ಯ ವ್ಯವಸ್ಥಾಪಕರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.