ಸೋಮವಾರಪೇಟೆ, ಫೆ. 26: ಮಾ. 30ರಂದು ಶಾಂತಳ್ಳಿಯಲ್ಲಿ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ, ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿ ನಡೆದ ತಾಲೂಕು ಕ.ಸಾ.ಪ. ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಈಗಾಗಲೇ ಸಮ್ಮೇಳನ ನಡೆಸುವ ಬಗ್ಗೆ ಹಲವು ಸಭೆಗಳನ್ನು ನಡೆಸಿ ವಿವಿಧ ಸಮಿತಿಗಳನ್ನು ರಚಿಸ ಲಾಗಿದೆ. ಸಮ್ಮೇಳನದ ಯಶಸ್ಸಿಗೆ ಸ್ಥಳೀಯರು ಹಾಗೂ ಸಂಘ ಸಂಸ್ಥೆ ಗಳು ಸಹಕಾರ ನೀಡಬೇಕೆಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಶಾಂತಳ್ಳಿ ಗ್ರಾಮದಲ್ಲಿ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮುಂದಾಗಿರುವದು ಉತ್ತಮ ಬೆಳವಣಿಗೆ. ಸಮ್ಮೇಳನದಲ್ಲಿ ಸ್ಥಳೀಯ ಕಲೆ ಸಂಸ್ಕøತಿಯ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ, ತಾಲೂಕು ಪಂಚಾಯಿತಿ ಸದಸ್ಯ ಧರ್ಮಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜೇತ, ಗೌರವ ಕಾರ್ಯದರ್ಶಿಗಳಾದ ಕೆ.ಎ. ಆದಮ್, ಪ್ರೇಮ ಮತ್ತಿತರರು ಉಪಸ್ಥಿತರಿದ್ದರು.