*ಸಿದ್ದಾಪುರ, ಫೆ. 26: ವಿಶೇಷಚೇತನರಿಗೆ ಸರಕಾರದಿಂದ ಲಭ್ಯವಾಗುವ ಎಲ್ಲಾ ಸೌಲಭ್ಯಗಳನ್ನು ಹಾಗೂ ಸ್ವಸಹಾಯ ಸಂಘಕ್ಕೆ ಸಾಲ ಸೌಲಭ್ಯವನ್ನು ಒದಗಿಸಿಕೊಡುವದಾಗಿ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಸಹಾಯಕ ನಿರ್ದೇಶಕ ಬೋರಪ್ಪ ಹೇಳಿದರು. ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಹಾಗೂ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂ.ಯ ಸಂಯುಕ್ತ ಆಶ್ರಯದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷಚೇತನರಿಗೆ ಗುರುತಿನ ಚೀಟಿ ವಿತರಿಸಲಾಯಿತು. ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಸಹಾಯಕ ನಿರ್ದೇಶಕ ಬೋರಪ್ಪ ಮಾತನಾಡಿ, ವಿಶೇಷಚೇತನರಿಗೆ ಸರಕಾರದ ಎಲ್ಲಾ ಸೌಲಭ್ಯ ದೊರಕಿಸುವ ಮೂಲಕ ಅವರನ್ನು ಆರ್ಥಿಕ ಸ್ವಾವಲಂಬಿಗಳ ನ್ನಾಗಿ ಮಾಡುವದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ಪಿಡಿಓ ಅನಿಲ್, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಹಾಜರಿದ್ದರು.