ಕುಶಾಲನಗರ, ಫೆ. 26: ತಾ. 28 ರಂದು ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡುವ ಕಾರ್ಯಕ್ರಮದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಬಸವನಹಳ್ಳಿ ಗ್ರಾಮದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸವನಹಳ್ಳಿಯಲ್ಲಿ 174 ಹಾಗೂ ಬ್ಯಾಡಗೊಟ್ಟದಲ್ಲಿ 354 ಸೇರಿದಂತೆ 528 ಮನೆಗಳು ನಿರ್ಮಾಣಗೊಂಡಿದ್ದು, ಫಲಾನುಭವಿಗಳಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮದ ಹಿನ್ನೆಲೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುವರು. ಈ ಸಂಬಂಧ ಪೂರ್ವಸಿದ್ಧತೆ ಹಿನ್ನೆಲೆ ಸಚಿವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಸವನಹಳ್ಳಿ ಶಿಬಿರದಲ್ಲಿ ನಿರ್ಮಾಣಗೊಂಡ ಮನೆಗಳಿಗೆ ಭೇಟಿ ನೀಡಿದ ಸಚಿವರು ಅಲ್ಲಿನ ಜನರೊಂದಿಗೆ ಅಭಿಪ್ರಾಯ ಸಂಗ್ರಹಿಸಿದರು.