ಕೂಡಿಗೆ, ಫೆ. 26 : ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ತಾ. 28 ರಂದು ಆಗಮಿಸುವ ಹಿನ್ನೆಲೆಯಲ್ಲಿ, ಬ್ಯಾಡಗೊಟ್ಟ ಹಾಗೂ ಬಸವನಹಳ್ಳಿ ಪುನರ್ವಸತಿ ಕೇಂದ್ರಗಳಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆ ಹಸ್ತಾಂತರಿಸುವ ಮನೆಗಳನ್ನು ಖುದ್ದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭ ಜಿಲ್ಲಾಧಿಕಾರಿಗಳು ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಬ್ಯಾಡಗೊಟ್ಟ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಒಂದು ಎಕರೆ ಜಾಗವನ್ನು ಶವಸಂಸ್ಕಾರಕ್ಕೆ ಕಾದಿರಿಸಲಾಗಿದೆ. ಈ ಎರಡೂ ಕೇಂದ್ರಗಳಿಗೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯವರು ಕಾರ್ಯೋನ್ಮುಖರಾಗಿದ್ದಾರೆ. ಈಗಾಗಲೇ ಸರ್ಕಾರದಿಂದ ಇವುಗಳಿಗೆ ಹಣ ಬಿಡುಗಡೆಯಾಗಿದ್ದು, ಇನ್ನುಳಿದ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲರಿಗೂ ವಸತಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದೆ ಎಂದರು.

ಈ ಸಂದರ್ಭ ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಸಚಿನ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಜಿಲ್ಲಾ ಗಿರಿಜನ ಯೋಜನ ಸಮನ್ವಯ ಅಧಿಕಾರಿ ಶಿವಕುಮಾರ್, ತಾಲೂಕು ತಹಶೀಲ್ದಾರ್ ಗೋವಿಂದರಾಜ್, ತಾಲೂಕು ಗಿರಿಜನ ಯೋಜನಾ ಸಹಾಯಕ ನಿರ್ದೇಶಕ ಶೇಖರ್, ಕಂದಾಯ ನಿರೀಕ್ಷಕ ಮಧುಸೂದನ್, ವಿವಿಧ ಇಲಾಖೆಯ ಇಂಜಿನಿಯರ್‍ಗಳು ಮತ್ತು ಅಧಿಕಾರಿ ವರ್ಗ ಸೇರಿದಂತೆ ಮತ್ತಿತರರು ಇದ್ದರು.