ಸೋಮವಾರಪೇಟೆ, ಫೆ. 26: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ರೂ. 2,61,588. ಉಳಿತಾಯ ಬಜೆಟ್ ಮಂಡಿಸಲಾಯಿತು. ಪ.ಪಂ. ಸಭಾಂಗಣದಲ್ಲಿ ಆಡಳಿತಾಧಿಕಾರಿ ತಹಶೀಲ್ದಾರ್ ಗೋವಿಂದರಾಜ್ ಅಧ್ಯಕ್ಷತೆಯಲ್ಲಿ ಬಜೆಟ್ ಮಂಡನೆ ಸಭೆ ನಡೆಯಿತು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜ್ ಉಳಿತಾಯದ ಬಜೆಟ್ ಮಂಡಿಸಿದರು.

ಪಂಚಾಯಿತಿ ಅಭಿವೃದ್ಧಿ ಹೊಂದುತ್ತಿದ್ದು, ಶಾಸಕರು ಹಾಗೂ ಸಂಸದರಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಕಾರ್ಯ ಮಾಡುವ ಭರವಸೆ ಇದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು ರೂ. 9,80,14,876 ಲಾಭವನ್ನು ನಿರೀಕ್ಷಿಸಲಾಗಿದೆ. ರೂ 9,77,53,288 ಖರ್ಚಿನ ಯೋಜನೆಯಿದ್ದು, ಖರ್ಚಿ ಗಿಂತಲೂ ರೂ. 2,61,588 ಉಳಿತಾಯ ವಾಗಲಿದೆ ಎಂದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿಯ ಪ್ರಥಮ ದರ್ಜೆ ಸಹಾಯಕ ಪಿಯೂಸ್ ಡಿಸೋಜಾ, ಲೆಕ್ಕಾಧಿಕಾರಿ ಭಾವನಾ ಇತರರು ಇದ್ದರು.