ವೀರಾಜಪೇಟೆ, ಫೆ. 27: ವೀರಾಜಪೇಟೆ ತಾಲೂಕು ಜಾನಪದ ಪರಿಷತ್ ವತಿಯಿಂದ ತಾ. 28 ರಂದು (ಇಂದು) ವೀರಾಜಪೇಟೆ ತಾಲೂಕು ಮಟ್ಟದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ವಿಭಾಗದಲ್ಲಿ ಜಾನಪದ ಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ.

ಸ್ಪರ್ಧಾ ಕಾರ್ಯಕ್ರಮವು ಪುರಭವನದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದ್ದು, ಉದ್ಘಾಟನೆಯನ್ನು ಸಂಗೀತ ಗುರುಗಳಾದ ದಿಲಿಕುಮಾರ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಶ್ರೀನಿವಾಸಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಅವರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ಜಾನಪದ ಪರಿಷತ್ತಿನ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ರಜಿತ ಕಾರ್ಯಪ್ಪ ತಿಳಿಸಿದ್ದಾರೆ.