ಮಡಿಕೇರಿ, ಫೆ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಇವರ ಸಹಯೋಗದೊಂದಿಗೆ 2018-19 ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಹಾಗೂ ಹಸಿರು-ನನಸಾದ ಕನಸು ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಅರಸು ಭವನದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮಿ ಪ್ರಿಯಾ, ಮೈಸೂರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಎ.ಉದಯಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎಲ್.ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ, ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕ ವಿಜಯ್ ಅಂಗಡಿ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಜಿಮ್ಮಿ ಸಿಕ್ವೇರಾ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಅಧ್ಯಕ್ಷ ಫಿಲಿಪ್ ವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.