ಸೋಮವಾರಪೇಟೆ,ಫೆ.27: ಪಟ್ಟಣದ ಸಿ.ಕೆ. ಸುಬ್ಬಯ್ಯ ರಸ್ತೆಯಿಂದ ಮಾರುಕಟ್ಟೆಗೆ ತೆರಳುವ ಜಂಕ್ಷನ್ ನಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆಂದು ಆಕ್ರೋಶಗೊಂಡ ಸಾರ್ವಜನಿಕರು, ಆತನಿಗೆ ಧರ್ಮದೇಟು ನೀಡಿದ್ದಾರೆ.

ಸಂಜೆ 5 ಗಂಟೆ ಸುಮಾರಿಗೆ ಜಂಕ್ಷನ್ ನಲ್ಲಿ ಈ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಇದರಿಂದ ಸಿಟ್ಟುಗೊಂಡ ಸ್ಥಳೀಯರು ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಾರ್ಖಂಡ್ ಮೂಲದ ಯುವಕ ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದು, ಮದ್ಯಪಾನ ಮಾಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.