ಮಡಿಕೇರಿ, ಫೆ.27: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಫೆಬ್ರವರಿ, 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ದಿಡ್ಡಳ್ಳಿ ಗಿರಿಜನರಿಗಾಗಿ ನಿರ್ಮಿಸಿರುವ ಮನೆಗಳ ಹಸ್ತಾಂತರ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 4.30 ಗಂಟೆಗೆ ಬಸವನಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ 16.40 ಲಕ್ಷ ರೂ. ವೆಚ್ಚದಲ್ಲಿ ಬೆಟ್ಟಗೇರಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣ (2 ಕೊಠಡಿ ನಿರ್ಮಾಣ), 8.20 ಲಕ್ಷ ರೂ. ವೆಚ್ಚದಲ್ಲಿ ಕೊಳಗದಾಳು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ (1 ಕೊಠಡಿ ನಿರ್ಮಾಣ), 32 ಲಕ್ಷ ರೂ. ವೆಚ್ಚದಲ್ಲಿ ಜೋಡುಪಾಲ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ (4-ಕೊಠಡಿ), ರೂ.14.50 ಲಕ್ಷ ರೂ. ವೆಚ್ಚದಲ್ಲಿ ಹೊದವಾಡ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ (2 ಕೊಠಡಿ), 24.60 ಲಕ್ಷ ರೂ. ವೆಚ್ಚದಲ್ಲಿ ಬೆಟ್ಟತ್ತೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ (3 ಕೊಠಡಿ), ಮಡಿಕೇರಿ ತಾಲೂಕಿನ ಒಟ್ಟು 95.70 ಲಕ್ಷ ರೂ. ವೆಚ್ಚದ ಕಾಮಗಾರಿ. ಹಾಗೂ 8.20 ಲಕ್ಷ ರೂ. ವೆಚ್ಚದಲ್ಲಿ ವೀರಾಜಪೇಟೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಗುಹ್ಯ ಒಟ್ಟು 103.90 ಲಕ್ಷ ರೂ. ಕಾಮಗಾರಿಗಳು.ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮೂಲಕ ಮೂರು ತಾಲೂಕಿನಲ್ಲಿ 2017-18ನೇ ಸಾಲಿನ ಕೊಡಗು ವಿಶೇಷ ಪ್ಯಾಕೇಜ್ ಅಡಿಯಲ್ಲಿ 5 ಸಾವಿರ ಲಕ್ಷ ರೂ. ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿ, 2,548 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲೆಯಲ್ಲಿ ಶಾಲಾ ಸಂಪರ್ಕ ಸೇತು (ಕಾಲು ಸಂಕ) ನಿರ್ಮಾಣದ ಕಾಮಗಾರಿಗಳ (ಒಟ್ಟು 172 ಕಾಮಗಾರಿಗಳು).
ಪ್ರವಾಸೋದ್ಯಮ ಇಲಾಖೆ ಮೂಲಕ 455 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲೆಯ ಮಡಿಕೇರಿಯ ರಾಜಾಸೀಟು ಉದ್ಯಾನವನದ ಕಾಮಗಾರಿ ಮತ್ತು 102 ಲಕ್ಷ ರೂ. ವೆಚ್ಚದಲ್ಲಿ ಸೋಮವಾರಪೇಟೆ ತಾಲೂಕು ದುಬಾರೆ ಕಾವೇರಿ ನದಿ ತೀರದ ಬಳಿ ಪಾರ್ಕಿಂಗ್ ಸೌಲಭ್ಯ ಅಭಿವೃದ್ಧಿ ಕಾಮಗಾರಿ.
ಕಾರಾಗೃಹ ಇಲಾಖೆ ಮೂಲಕ 450 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ವೀರಾಜಪೇಟೆ ತಾಲೂಕಿನ ಉಪ ಕಾರಾಗೃಹ ಕಟ್ಟಡ ಕಾಮಗಾರಿ, ಲೋಕೋಪಯೋಗಿ ಇಲಾಖೆ ಮೂಲಕ 120 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಸೋಮವಾರಪೇಟೆ ತಾಲೂಕಿನ ಲೋಕೋಪಯೋಗಿ ಇಲಾಖೆಯ ಉಪ ವಿಭಾಗ ಕಚೇರಿ ಕಟ್ಟಡ ಕಾಮಗಾರಿ, ಜಿಲ್ಲೆಯ ಮೂರು ತಾಲೂಕಿನಲ್ಲಿ ಒಟ್ಟು 8,675 ಲಕ್ಷ ರೂ. ವೆಚ್ಚದ ಕಾಮಗಾರಿಗಳು.
ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖಾ ವ್ಯಾಪ್ತಿಯಲ್ಲಿ 2,481.60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಮನೆಗಳ ನಿರ್ಮಾಣ ಕಾಮಗಾರಿ ಉದ್ಘಾಟನೆ, ಬಸವನಹಳ್ಳಿ ಒಟ್ಟು 138 ಮನೆಗಳು ಮತ್ತು ಬ್ಯಾಡಗೊಟ್ಟ 170 ಮನೆಗಳು. 1134.97 ಲಕ್ಷ ರೂ. ವೆಚ್ಚದಲ್ಲಿ ಬಡಾವಣೆ ನಿರ್ಮಾಣ ಮತ್ತು ಇತರೆ ಮೂಲಭೂತ ಸೌಲಭ್ಯ ಕಾಮಗಾರಿ ಉದ್ಘಾಟನೆ. 198 ಲಕ್ಷ ರೂ. ವೆಚ್ಚದಲ್ಲಿ ಬಸವನಹಳ್ಳಿ ಆಶ್ರಮ ಶಾಲೆ ವಸತಿ ನಿಲಯ ಉದ್ಘಾಟನೆ ಮತ್ತು 320.50 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕಟ್ಟಡ ಶಂಕುಸ್ಥಾಪನೆ.
(ಮೊದಲ ಪುಟದಿಂದ) 1253.50 ಲಕ್ಷ ರೂ. ವೆಚ್ಚದ ಪ್ರಕೃತಿ ವಿಕೋಪದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ. ಒಟ್ಟು 5388.57 ಲಕ್ಷ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಆರೋಗ್ಯ ಇಲಾಖೆ ಮೂಲಕ 120 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ವಸತಿ ಗೃಹ ಉದ್ಘಾಟನೆ ಮಾಡಲಿ ದ್ದಾರೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಕುಶಾಲನಗರದ ಗುಮ್ಮನಕೊಲ್ಲಿಯಲ್ಲಿ ನಿರ್ಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟನೆ ಮಾಡಲಿದ್ದಾರೆ. ಒಟ್ಟು 14347.47 ಲಕ್ಷ ರೂ. ವೆಚ್ಚದ ಕಾಮಗಾರಿ ಉದ್ಘಾಟನೆ - ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.