ಮಡಿಕೇರಿ, ಫೆ. 27: ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನದೊಂದಿಗೆ ಸ್ವಾಯತ್ತತೆ ಕಲ್ಪಿಸುವ ಬೇಡಿಕೆಯ ಕುರಿತಾಗಿ ಡಾ. ಸುಬ್ರಮಣ್ಯನ್ ಸ್ವಾಮಿ ಅವರು ತಾ. 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಈ ವಿಚಾರವನ್ನು ಪರಿಗಣಿಸುವಂತೆ ಕೋರಿದ್ದಾರೆ.
ಈ ಕುರಿತಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರಿಗೆ ಸುಬ್ರಮಣ್ಯನ್ ಸ್ವಾಮಿ ಅವರು ಸಂದೇಶ ನೀಡಿದ್ದು, ಕೊಡವ ಪಾರಂಪರಿಕ ಸ್ಥಾನಮಾನ ಹಾಗೂ ರಾಮಸೇತುವನ್ನು ಪಾರಂಪರಿಕ ಸ್ಮಾರಕವಾಗಿ ಘೋಷಣೆ ಮಾಡಬೇಕೆಂದು ಗಮನ ಸೆಳೆದಿರುವದನ್ನು ತಿಳಿಸಿದ್ದಾರೆ. ಈ ವಿಚಾರವಾಗಿ ಲೋಕಸಭಾ ಚುನಾವಣೆಗೂ ಮುನ್ನ ಕಾರ್ಯರೂಪಕ್ಕೆ ತರಬೇಕೆಂದು ಹಿರಿಯ ಮುಖಂಡ ಡಾ. ಸುಬ್ರಮಣ್ಯನ್ ಸ್ವಾಮಿ ಅವರು ಒತ್ತಾಯಿಸಿರುವದಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ. 2017ರಲ್ಲಿ ಮಡಿಕೇರಿಯಲ್ಲಿ ನಡೆದ ಕೊಡವ ನ್ಯಾಷನಲ್ ಡೇಯಲ್ಲಿ ಡಾ. ಸ್ವಾಮಿ ಅವರು ಪಾಲ್ಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.