ಮಡಿಕೇರಿ, ಫೆ. 27: ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಚಿಕ್ಕಅಳುವಾರ ಕಾಲೇಜ್ ವತಿಯಿಂದ ರಾಣಿಗೇಟ್ ಸರಕಾರಿ ಗಿರಿಜನ ಆಶ್ರಮ ಶಾಲೆ ಆವರಣದಲ್ಲಿ ಆಯೋಜಿಸಿರುವ ಗ್ರಾಮೀಣ ಅಧ್ಯಯನ ಶಿಬಿರಕ್ಕೆ ಚಾಲನೆ ದೊರೆತಿದೆ.
ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪ ಕ್ಷೇತ್ರದ ಜಿ.ಪಂ. ಸದಸ್ಯ ವಿ. ರಾಜೇಂದ್ರ, ಗಿರಿಜನ ಹಾಡಿಯ ನಿವಾಸಿಗಳಿಗೆ ಸ್ಪಚ್ಛತೆಯ ಬಗ್ಗೆ ಅರಿವು ಮತ್ತು ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದರು. ತಮ್ಮ ಆರೋಗ್ಯವನ್ನು ತಾವೇ ಕಾಪಾಡಿ ಕೊಳ್ಳುವಂತೆ ಸಲಹೆ ನೀಡಿದರು.
ಕೊಪ್ಪ ಗ್ರಾ.ಪಂ. ಉಪಾಧ್ಯಕ್ಷ ಯಶ್‍ವಂತ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಗ್ರಾಮೀಣ ಅಧ್ಯಯನ ಶಿಬಿರದ ಮೂಲಕ ಗ್ರಾಮಸ್ಥರಿಗೆ ದೈನಂದಿನ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ ಜಾಗೃತಿಗೊಳಿಸಬೇಕೆಂದರು. ಶುಚಿತ್ವ ಕಾಪಾಡುವದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎನ್ನುವ ದನ್ನು ಮನದಟ್ಟು ಮಾಡಿಕೊಡುವಂತೆ ತಿಳಿಸಿದರು.
ಶಿಕ್ಷಕ ಚಂದ್ರಶೇಖರ್ ಮಾತನಾಡಿ, ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ನಾಡಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಸಮಾಜ ಕಾರ್ಯ ವಿಭಾಗದ ಶಿಬಿರಾ ಧಿಕಾರಿ ನಟರಾಜ್ ಮಾತನಾಡಿ, ಸಮಾಜ ಕಾರ್ಯ ಕೋರ್ಸ್ ಹಾಗೂ ಅದರ ಕಾರ್ಯ ವೈಖರಿಯ ಬಗ್ಗೆ ತಿಳಿಸಿದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗÀಳು ತಮ್ಮ ಶೈಕ್ಷಣಿಕ ಪಠ್ಯಕ್ಕೆ ಸಂಬಂಧಿಸಿದಂತೆ ಯಾವ ರೀತಿ ಕಾರ್ಯ ನಿರ್ವಹಿಸಬಹುದು ಎನ್ನುವದನ್ನು ವಿವರಿಸಿ ದರು. ಪ್ರಾಸ್ತವಿಕವಾಗಿ ಮಾತನಾಡಿದ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಹರಿಣಾಕ್ಷಿ, ಗ್ರಾಮೀಣ ಅಧ್ಯಯನ ಶಿಬಿರ ಎನ್‍ಎಸ್‍ಎಸ್ ಶಿಬಿರಕ್ಕಿಂತ ಹೇಗೆ ಭಿನ್ನವಾಗಿದೆ ಎಂಬದರ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಚಿಕ್ಕಅಳುವಾರ ಕಾಲೇಜ್‍ನ ಪ್ರಬಾರ ನಿರ್ದೇಶಕರಾದ ಪ್ರೊ. ಮಂಜುಳಾ ಶಾಂತರಾಮ್ ಗ್ರಾಮೀಣ ಅಧ್ಯಯನವು ಯಾವ ವಿಷಯಗಳನ್ನೊಳಗೊಂಡಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೊಪ್ಪ ಗ್ರಾ.ಪಂ. ಅಧ್ಯಕ್ಷರಾದ ಶಾಹಿನ ಭಾನು, ಸದಸ್ಯರಾದ ಜಲೀಲ್, ಚಂದ್ರಶೇಖರ್, ಸರ್ಕಾರಿ ಗಿರಿಜನ ಆಶ್ರಮ ಶಾಲೆಯ ಮುಖ್ಯ ಶಿಕ್ಷಕರಾದ ಕೀರ್ತಿ ಕುಮಾರ್, ರಾಣಿ ಗೇಟ್, ಆದಿವಾಸಿ ಸಮೂಹದ ಹಿರಿಯ ಹೋರಾಟ ಗಾರ್ತಿ ಅಕ್ಕಮ್ಮ ಹಾಗೂ ಸಮಾಜ ಕಾರ್ಯ ವಿಭಾಗದ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.