ಮಡಿಕೇರಿ, ಫೆ. 27: ಮಡಿಕೇರಿ ತಾಲೂಕಿನ ಭಾಗಮಂಡಲ ಹೋಬಳಿಯ ತಣ್ಣಿಮಾನಿ ಮತ್ತು ತಾವೂರು ಗ್ರಾಮದಲ್ಲಿ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ ಜಾಗ ಒತ್ತುವರಿ ಪ್ರಕರಣವನ್ನು ಜಿಲ್ಲಾ ಟಾಸ್ಕ್‍ಫೋರ್ಸ್ ಮೂಲಕ ತ್ವರಿತ ಕ್ರಮ ಕೈಗೊಳ್ಳಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಈ ಕುರಿತು ಕೊಡವ ಮಕ್ಕಡ ಕೂಟದ ಬೊಳ್ಳಜೀರ ಅಯ್ಯಪ್ಪ ಅವರು ಇಲಾಖೆಗೆ ಈ ಹಿಂದೆ ದೂರು ಸಲ್ಲಿಸಿದ್ದು, 195 ಎಕರೆ ಜಮೀನಿನಲ್ಲಿ 156.04 ಏಕರೆಯನ್ನು 71 ಮಂದಿ ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸುವಂತೆ ಕೋರಿದ್ದರು.
ಈ ಕುರಿತು ಆಯುಕ್ತರ ಕಾರ್ಯಾ ಲಯದಿಂದ ಜಿಲ್ಲಾಧಿಕಾರಿ ಗಳಿಗೆ ಪತ್ರ ರವಾನೆಯಾಗಿದ್ದು, ಜಿಲ್ಲಾ ಟಾಸ್ಕ್ ಫೋರ್ಸ್ ಮೂಲಕ ತ್ವರಿತವಾಗಿ ಕ್ರಮ ಕೈಗೊಂಡು ಈ ಬಗ್ಗೆ ಅರ್ಜಿದಾರರಿಗೆ ಹಾಗೂ ಇಲಾಖಾ ಕಚೇರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ.