ಮಡಿಕೇರಿ, ಫೆ.27 :ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕ ಸಮ್ಮಾನ ದಿನಾಚರಣೆಯು ಮಾರ್ಚ್ 1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್.ಡಿ ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್, ಕಾರ್ಮಿಕ ಅಧಿಕಾರಿ ಎಂ.ಎಚ್.ರಾಮಕೃಷ್ಣ ಇತರರು ಪಾಲ್ಗೊಳ್ಳಲಿದ್ದಾರೆ.