ಸೋಮವಾರಪೇಟೆ, ಫೆ. 27: ಗ್ರಾಮ ವಿಪತ್ತು ನಿರ್ವಹಣಾ ಯೋಜನೆಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮಾ. 1 ರಂದು (ನಾಳೆ) ಪೂರ್ವಾಹ್ನ 10 ಗಂಟೆಗೆ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಶಾಂತಳ್ಳಿ ಗ್ರಾ.ಪಂ. ಅಧ್ಯಕ್ಷ ಅನಿಲ್‍ಕುಮಾರ್ ಅಧ್ಯಕ್ಷತೆಯಲ್ಲಿ ಶಾಂತಳ್ಳಿಯ ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ವಿಶೇಷ ಗ್ರಾಮ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.