ಸುಂಟಿಕೊಪ್ಪ, ಫೆ. 27: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಕಾಲು ಮುರಿತಕ್ಕೊಳಗಾಗಿರುವ ಘಟನೆ ಸಮೀಪದ ಏಳನೇ ಹೊಸಕೋಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಏಳನೇ ಹೊಸಕೋಟೆ ನಿವಾಸಿ ಹೊನ್ನಮ್ಮ (65) ಗಾಯಗೊಂಡವರು.

ಕುಶಾಲನಗರದಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಬೈಕು ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ಡಿಕ್ಕಿಯಾಗಿದೆ. ಗಾಯಾಳುವನ್ನು ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.