ಸೋಮವಾರಪೇಟೆ, ಫೆ. 27: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಸೋಮವಾರಪೇಟೆ ನ್ಯಾಯಾಲಯ ಆವರಣದಲ್ಲಿ ಮೂಲಭೂತ ಹಕ್ಕುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ಎಸ್. ಭರತ್ ಮೂಲಭೂತ ಹಕ್ಕುಗಳ ಬಗ್ಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದಲ್ಲಿ ವಕೀಲರಾದ ಹರೀಶ್ ಮತ್ತು ಜೀವನ್ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗಿಯಾಗಿದ್ದರು. ವಕೀಲ ಕಾಟ್ನಮನೆ ವಿಠಲ್ ಅವರು ಕಾರ್ಯಕ್ರಮ ನಿರ್ವಹಿಸಿದರು.