*ತಾ. 5 ರಂದು ಚಾಲನೆ * ಡಿಸಿಸಿ ಸಭೆ
ಮಡಿಕೇರಿ, ಫೆ. 28: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ತಾ. 5 ರಂದು ಜನಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಆರಂಭಿಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ನಗರದ ಕಮ್ಯುನಿಟಿ ಹಾಲ್ನಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯ ಬಳಿಕ ‘ಶಕ್ತಿ’ಗೆ ಮಂಜುನಾಥ್ ಕುಮಾರ್ ಸಭೆಯಲ್ಲಿನ ಚರ್ಚೆಗಳ ಕುರಿತು ಮಾಹಿತಿ ನೀಡಿದರು. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ನಿರ್ಧರಿಸಲಾಯಿತು. ಭಾರತೀಯ ಜನತಾ ಪಾರ್ಟಿ ವಿನಾ ಕಾರಣ ಅಮಾಯಕರ ಮೇಲೆ ದೇಶ ದ್ರೋಹದ ಆರೋಪ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಸಭೆಯಲ್ಲಿ ಖಂಡನೆ ವ್ಯಕ್ತಪಡಿಸಲಾಯಿತು ಎಂದು ಮಂಜುನಾಥ್ ಕುಮಾರ್ ತಿಳಿಸಿದರು.
ಸಭೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ವೆಂಕಪ್ಪಗೌಡ, ಸಿ.ಹೆಚ್. ವಿಜಯ ಶಂಕರ್, ಟಿ.ಪಿ. ರಮೇಶ್, ಚಂದ್ರಕಲಾ, ಬ್ಲಾಕ್ ವಲಯ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಪಾಲ್ಗೊಂಡಿದ್ದರು.