ಕೂಡಿಗೆ, ಫೆ. 28: ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಶ್ರಯದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ ತೊರೆನೂರು ಸಹಕಾರ ಸಂಘದ ಆವರಣದಲ್ಲಿ ನಡೆಯಿತು. ಉದ್ಘಾಟನೆಯನ್ನು ತೊರೆನೂರು ಸಹಕಾರ ಕೃಷಿ ಪತ್ತಿನ ಅಧ್ಯಕ್ಷ ಟಿ.ಎಸ್. ಕೃಷ್ಣೇಗೌಡ ನೆರವೇರಿಸಿದರು.

ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಸ್ವಸಹಾಯ ಗುಂಪುಗಳ ನೋಡಲ್ ಅಧಿಕಾರಿ ಟಿ.ಎಸ್. ತುಂಗರಾಜು, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಹೆಬ್ಬಾಲೆ ಸಹಕಾರ ಸಂಘದ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಸಹಕಾರ ಸಂಘಗಳ ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಈ ವ್ಯಾಪ್ತಿಯ ಸಹಕಾರ ಸಂಘಗಳ ಒಕ್ಕೂಟದ ಸ್ವಸಹಾಯ ಗುಂಪುಗಳ ಮಹಿಳೆಯರು ಭಾಗವಹಿಸಿದ್ದರು.