ಮಡಿಕೇರಿ, ಫೆ. 28: ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯ ವಣಚಲುವಿನಲ್ಲಿ ತೋಟದೊಳಗೆ ಮರದ ಕೊಂಬೆ ಕತ್ತರಿಸುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ದುರ್ಘಟನೆ ತಾ. 26 ರಂದು ಸಂಭವಿಸಿದೆ. ಅಲ್ಲಿನ ನಿವಾಸಿ ಎಂ. ನಂಜಪ್ಪ (32) ಎಂಬವರು ಕಾಫಿ ತೋಟದಲ್ಲಿ ಕೆಲಸದ ವೇಳೆ ಮರದಿಂದ ಬಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತರಾಗಿದ್ದು, ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿದ್ದಾರೆ. ಮೃತ ಅವಿವಾಹಿತನೆಂದು ತಿಳಿದು ಬಂದಿದೆ.