ಶನಿವಾರಸಂತೆ, ಫೆ. 28: ವಿದ್ಯೆ ಹಾಗೂ ಕ್ರೀಡೆ ವಿದ್ಯಾರ್ಥಿಯ ಭವಿಷ್ಯ ರೂಪಿಸಿ ಸುಂದರ ಬದುಕನ್ನು ಕಟ್ಟಿಕೊಡುತ್ತದೆ ಎಂದು ವಿಘ್ನೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ. ಸುಬ್ರಮಣ್ಯ ಅಭಿಪ್ರಾಯಪಟ್ಟರು. ಪಟ್ಟಣದ ವಿಘ್ನೇಶ್ವರ ವಿದ್ಯಾಸಂಸ್ಥೆ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ್ದ ಶಾರದ ಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್ ಮಾತನಾಡಿ, ಪರೀಕ್ಷಾ ಸಿದ್ಧತೆ ಬಗ್ಗೆ ಹಿತನುಡಿಗಳನ್ನು ಆಡಿದರು. ವಿದ್ಯಾರ್ಥಿನಿಯರು ಅನಿಸಿಕೆ ಹಂಚಿಕೊಂಡರು. ಸಂಸ್ಥೆ ಉಪಾಧ್ಯಕ್ಷ ಕೃಷ್ಣರಾಜ್, ನಿರ್ದೇಶಕಿ ನಿತ್ಯಾನಿಧಿ, ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.