ವೀರಾಜಪೇಟೆ, ಫೆ. 28: ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವಿನ್ ಮಾತನಾಡಿ, ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯದ ಬಗ್ಗೆ ಮಾಹಿತಿಯಿತ್ತರು.

ಮುಖ್ಯ ಅತಿಥಿ ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್ ಮಾತನಾಡಿ, ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಲವು ವಿಧದ ಸೌಲಭ್ಯಗಳು ದೊರಕುತ್ತವೆ. ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡು ಸೌಲಭ್ಯವನ್ನು ಪಡೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಜ್ಜಾಗಬೇಕು ಎಂದರು. ವೇದಿಕೆಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಮಚ್ಚಾಡೋ, ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಐಸಾಕ್ ರತ್ನಾಕರ್ ಸಹಾಯಕ ಧರ್ಮಗುರುಗಳಾದ ರೆ.ಫಾ. ರೋಶನ್ ಬಾಬು ಉಪಸ್ಥಿತರಿದ್ದರು. ಶಿಕ್ಷಕರಾದ ಜಫ್ರಿ ಡಿಸೋಜ ನಿರೂಪಿಸಿ, ವಂದಿಸಿದರು.