ಮಡಿಕೇರಿ, ಫೆ. 28: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ವತಿಯಿಂದ ತಾ. 1 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಶಿಶು ಕಲ್ಯಾಣ ಸಂಸ್ಥೆ, ಮಡಿಕೇರಿಯಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಮಡಿಕೇರಿ ತಾಲೂಕಿನ ಸಾಮೂಹಿಕ ವಿವಾಹ ಆಯೋಜಕರಿಗೆ, ಪೂಜಾರಿಗಳಿಗೆ, ಕಲ್ಯಾಣ ಮಂಟಪದ ವ್ಯವಸ್ಥಾಪಕರು, ಧಾರ್ಮಿಕ ಮುಖಂಡರು, ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.