ಸೋಮವಾರಪೇಟೆ: ತಾಲೂಕಿನ ಹುದುಗೂರು ಗ್ರಾಮದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.

ಮಾ. 4 ರಂದು ಬೆಳಿಗ್ಗೆ 8.30 ರಿಂದ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾ ಮೃತ್ಯುಂಜಯ ಹೋಮ, ಶ್ರೀ ರುದ್ರಹೋಮ, ರುದ್ರಾಭಿಷೇಕ ನಡೆಯಲಿದೆ. ಸಂಜೆ 4.30ಕ್ಕೆ ಶ್ರೀ ಉಮಾಮಹೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ವಾದ್ಯಗೋಷ್ಠಿಯೊಂದಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಗುವದು. ಮಧ್ಯಾಹ್ನ ಲಘು ಉಪಹಾರ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿರುವದಾಗಿ ತಿಳಿಸಿದ್ದಾರೆ.

ಶ್ರೀ ಭಗಂಡೇಶ್ವರದಲ್ಲಿ: ಮಹಾ ಶಿವರಾತ್ರಿ ಪ್ರಯುಕ್ತ ಭಗಂಡೇಶ್ವರ ದೇವಾಲಯದಲ್ಲಿ ಮಾ. 4 ರಂದು ಬೆಳಿಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, 9.30 ಗಂಟೆಯಿಂದ ರುದ್ರಹೋಮ, ಪೂರ್ಣಾಹುತಿ, ಪ್ರಸಾದ ವಿತರಣೆ, ಸಂಜೆ 6 ರಿಂದ ತಾಯಂಬಿಕ ಸೇವೆ, 6.30 ಗಂಟೆಯಿಂದ ಏಕದಶ ರುದ್ರಾಭಿಷೇಕ, ದೇವರ ನೃತ್ಯ, ಪ್ರಸಾದ ವಿತರಣೆ ಜರುಗಲಿದೆ.

ಕೆದಕಲ್: ಮಾರ್ಚ್ 4 ರಂದು ಸಾಯಂಕಾಲ 4 ಗಂಟೆಗೆ ಕೆದಕಲ್ ಮಹಾದೇವ ಈಶ್ವರ ದೇವಾಲಯದಲ್ಲಿ ಮಹಾ ಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹಃ ಪಂಚಕಲಶ, ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ ಪೂರ್ಣಾಹುತಿ, ನಂತರ ಈಶ್ವರ ಸ್ವಾಮಿಗೆ ವಿಶೇಷ ಪುಷ್ಪಾಲಂಕಾರ ಹಾಗೂ ಬಿಲ್ವಾರ್ಚನೆ, ಸಹಸ್ರ ದೀಪಾರಾಧನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವಿರಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾ. 3 ಮತ್ತು 4 ರಂದು ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕಾರ್ಯಕ್ರಮಗಳು ವೇದಮೂರ್ತಿ ಗಣೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಎರಡು ದಿನಗಳಲ್ಲಿಯೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿರುವದಾಗಿ ದೇವಸ್ಥಾನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಶ್ರೀಮಂಗಲ: ಶ್ರೀಮಂಗಲ, ಕುಮುಟೂರು ಬಾಡಗ ಗ್ರಾಮದ ಪೇರ್ಮಾಡು, ಶ್ರೀ ಈಶ್ವರ ದೇವಸ್ಥಾನದಲ್ಲಿ ಮಾರ್ಚ್ 4 ರಂದು ಮಹಾ ಶಿವರಾತ್ರಿ ಉತ್ಸವದ ಅಂಗವಾಗಿ ಮುಂಜಾನೆ 4 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಭಕ್ತಾದಿಗಳಿಂದ ರುದ್ರಾಭಿಶೇಕ ಪೂಜೆ, ಸಂಜೆ 5.30 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದೇವರ ಅವಭೃತ ಸ್ನಾನ, ಉತ್ಸವ ಮೂರ್ತಿಯ ನೃತ್ಯ ಪ್ರದಕ್ಷಿಣೆ, ರಾತ್ರಿ 10 ರಿಂದ 11 ರವರೆಗೆ ಸಾಮೂಹಿಕ ವಸಂತ ಪೂಜೆ ಮತ್ತು ಸತ್ಯ ನಾರಾಯಣ ಪೂಜೆ ನಡೆಯಲಿದೆ. ಇಡೀ ರಾತ್ರಿ ಜಾಗರಣೆ ನಿಮಿತ್ತ ಮನೋರಂಜನೆಯ ಕಾರ್ಯಕ್ರಮಗಳು ಜರುಗುವದು ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಮಾಲಂಬಿ: ಮಾ. 4 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಾಲಂಬಿ ಗ್ರಾಮದಲ್ಲಿರುವ ಶ್ರೀ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿ ವರ್ಷದಂತೆ ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ವಿಶೇಷ ಪೂಜೆ, ದೇವತಾ ಪೂಜೆ ಹಾಗೂ ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯುತ್ತದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.

ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾ. 3 ಮತ್ತು 4 ರಂದು ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ವೇದಮೂರ್ತಿ ಗಣೇಶ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈಧಿಕ ಸಾಮಾಜಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿರುವದಾಗಿ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.