ಗೋಣಿಕೊಪ್ಪಲು, ಫೆ. 28: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಆಯೋಜಿಸ ಲಾಗಿದ್ದ ಪುಳ್ಳಂಗಡ ಸಿ. ದೇವಯ್ಯ ಸ್ಮಾರಕ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಮಹಿಳೆಯರ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಮೂಡಬಿದಿರೆಯ ಆಳ್ವಾಸ್ ಬಿ.ಪಿ.ಇಡಿ ಕಾಲೇಜು ರನ್ನರ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಫೈನಲ್ ಪಂದ್ಯದಲ್ಲಿ ಮೂಡಬಿದಿರೆಯ ಆಳ್ವಾಸ್ ಬಿ.ಪಿ.ಇಡಿ ಕಾಲೇಜು ವಿರುದ್ಧ 3-0 ಗೋಲಿನಿಂದ ಜಯ ಸಾಧಿಸಿದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಚಾಂಪಿಯನ್ ಪಟ್ಟ ಅಲಂಕರಿಸಿತು. ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ತಂಡದ ಅಂತರ್ರಾಷ್ಟ್ರೀಯ ಹಾಕಿ ಆಟಗಾರ್ತಿ ಎಂ.ಜೆ. ಲೀಲಾವತಿ ಪಡೆದುಕೊಂಡರು. ಬೆಸ್ಟ್ ಗೋಲ್ ಕೀಪರ್ ಪ್ರಶಸ್ತಿಯನ್ನು ಆಳ್ವಾಸ್ ಬಿ.ಪಿ.ಇಡಿ ಕಾಲೇಜು ತಂಡದ ನೀತು ಪಡೆದುಕೊಂಡರು. ಬೆಸ್ಟ್ ಮಿಡ್ ಫೀಲ್ಡರ್ ಪ್ರಶಸ್ತಿಯನ್ನು ವೀರಾಜಪೇಟೆ ಕಾವೇರಿ ಕಾಲೇಜು ತಂಡದ ದೇಚಮ್ಮ , ಬೆಸ್ಟ್ ಹಾಫ್ ಪ್ರಶಸ್ತಿಯನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಮೋನಿಶ್ ಮುತ್ತಮ್ಮ, ಬೆಸ್ಟ್ ಫಾರ್ವಡ್ ಪ್ರಶಸ್ತಿಯನ್ನು ಆಳ್ವಾಸ್ ಬಿ.ಪಿ.ಇಡಿ ಕಾಲೇಜಿನ ಮರೀನ, ಟಾಪ್ ಸ್ಕೋರರ್ ಪ್ರಶಸ್ತಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪವಿತ್ರ, ಉತ್ತಮ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಯನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ದರ್ಶಿನಿ, ಬೆಸ್ಟ್ ಬ್ಯಾಕ್ ಪ್ರಶಸ್ತಿಯನ್ನು ಆಳ್ವಾಸ್ ಪದವಿ ಕಾಲೇಜಿನ ಶರಣ್ಯ ಪಡೆದುಕೊಂಡರು.
ಪಂದ್ಯಾವಳಿಯನ್ನು ಕಾವೇರಿ ಕಾಲೇಜು ಪ್ರಾಂಶುಪಾಲ ಪ್ರೊ.ಎಸ್.ಆರ್.ಉಷಾಲತ ಉದ್ಘಾಟಿಸಿದರು. ಬಹುಮಾನ ವಿತರಣಾ ಸಮಾರಂಭದಲ್ಲಿ ವೀರಾಜಪೇಟೆ ಕಾವೇರಿ ಕಾಲೇಜು ಪ್ರಾಂಶುಪಾಲ ಪ್ರೊ. ಸಿ.ಎಂ. ನಾಚಪ್ಪ, ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಉಪ ಪ್ರಾಂಶುಪಾಲ ಎ.ಎಂ ಕಮಲಾಕ್ಷಿ ಮಂಗಳೂರು ವಿಶ್ವವಿದ್ಯಾಲಯದ ಪರವಾಗಿ ವೀಕ್ಷಕರಾಗಿ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ರಾಖಿ ಪೂವಣ್ಣ , ಪ್ರೊ. ಕುಸುಮಾಧರ್, ದೈಹಿಕ ಶಿಕ್ಷಣ ನಿದೆರ್Éೀಶಕರಾದ ಚಿಟ್ಟಿಯಪ್ಪ, ಎಂ.ಟಿ. ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು. ಅಜ್ಜಮಾಡ ಪೊನ್ನಪ್ಪ ವೀಕ್ಷಕ ವಿವರಣೆ ನೀಡಿದರು.