ಸೋಮವಾರಪೇಟೆ, ಫೆ. 28: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮಾರ್ಚ್ 3 ರಂದು ಚುನಾವಣೆ ನಡೆಯಲಿದ್ದು, ಶನಿವಾರಸಂತೆ ಗುಡುಗಳಲೆ ಜಾತ್ರಾ ಮೈದಾನದ ಬಸವೇಶ್ವರ ದೇವಾಲಯದ ಆವರಣದಲ್ಲಿ ಮತದಾನ ನಡೆಯಲಿದೆ ಎಂದು ಜಿಲ್ಲಾ ಘಟಕದ ಸಹಾಯಕ ಚುನಾವಣಾಧಿಕಾರಿ ಎಸ್.ಬಿ. ನಂಜಪ್ಪ ತಿಳಿಸಿದ್ದಾರೆ.
ಇಲ್ಲಿನ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ನಡೆಲಿದೆ. 2500 ರೂ.ಗಳಿಗಿಂತ ಹೆಚ್ಚಿಗೆ ಹಣ ಪಾವತಿಸಿ, ಸದಸ್ಯತ್ವ ಪಡೆದವರು ಮಾತ್ರ ಮತದಾನ ಮಾಡಬಹುದು ಎಂದು ಹೇಳಿದರು.
ಜಿಲ್ಲೆಯಲ್ಲಿ 116 ಜನ ಮತದಾರರಿದ್ದು, ಎಲ್ಲಾ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮಹಾಸಭಾದ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜ್ ಹೇಳಿದರು. ಮತದಾರರ ಪಟ್ಟಿ ಬೇಕಾದವರು ಹಾಗೂ ಇತರ ಮಾಹಿತಿಯನ್ನು ಪಡೆಯಲು ಇಚ್ಪಿಸುವವರು ಮೊ. 9449933289 ಇದರಲ್ಲಿ ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಮಹಾಸಭಾದ ಗೌರವಾಧ್ಯಕ್ಷ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉಪಸ್ಥಿತರಿದ್ದರು.