ಕೂಡಿಗೆ, ಫೆ. 28: ಕೊಡಗು ಜಿಲ್ಲೆಯ ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀದರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ ಮತ್ತು ಶೈಕ್ಷಣಿಕ ವಿಚಾರಗೋಷ್ಠಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಸನ್ಮಾನ ಸಮಾರಂಭ ತಾ. 2 ರಂದು ಕುಶಾಲನಗರದ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಡಿಕೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಮಚ್ಚಾಡೋ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೂಡಿಗೆ ಶಿಕ್ಷಕರ ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ವಾಲ್ಟರ್ ಹಿಲೇರಿ ಡಿಮೆಲ್ಲೊ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಬೆಟ್ಟನಾಯಕ, ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀದರೇತರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಕೆ, ಕೊಡಗು ಜಿಲ್ಲಾ ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಮತ್ತಿತರರು ಭಾಗವಹಿಸಲಿದ್ದಾರೆ.