ಸಿದ್ದಾಪುರ, ಫೆ. 28: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಕಾಡುವಿನಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕೆಂದು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ಇತ್ಯರ್ಥಪಡಿಸ ಬೇಕೆಂದು ಆಗ್ರಹಿಸಿ ಬೆಟ್ಟದ ಕಾಡು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಕಾಡು ಏಳನೇ ವಾರ್ಡ್ ಹೊರತುಪಡಿಸಿ ಇತರ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಬೆಟ್ಟದ ಕಾಡು ಗ್ರಾಮವನ್ನು ಕಡೆಗಣಿಸಿ ಪಂಚಾಯಿತಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳೀಯ ಗ್ರಾ.ಪಂ. ಸದಸ್ಯರು ಅಭಿವೃದ್ಧಿ ಕಾರ್ಯ ಮಾಡಲು ಅನುದಾನ ಇಲ್ಲ ಎಂಬಿತ್ಯಾದಿ ಉತ್ತರ ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಟ್ಟದ ಕಾಡುವಿನ ಗ್ರಾಮಸ್ಥರು ಸೇರಿ ಗ್ರಾ.ಪಂ. ಮುಂಬಾಗ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದ್ದಾರೆ.