ಚೆಟ್ಟಳ್ಳಿ, ಮಾ. 1: ಸಿದ್ದಾಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯ ಕಾರಣದಿಂದ ರಸ್ತೆಗಳು ಹದಗೆಟ್ಟು ಸಂಚಾರಕ್ಕೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವದನ್ನು ಮನಗಂಡು ವಿವಿಧ ಯೋಜನೆಗಳ ಮೂಲಕ ಹಲವು ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಪಂಚಾಯಿತಿ ಸದಸ್ಯೆ ಸರಿತಾ ಪೂಣಚ್ಚ ಚಾಲನೆ ನೀಡಿದರು
ಸಿದ್ದಾಪುರ ಕರಡಿಗೋಡು ರಸ್ತೆಗೆ ಅಂದಾಜು ರೂ. 15 ಲಕ್ಷ ವೆಚ್ಚದಲ್ಲಿ ಇಂಟರ್‍ಲಾಕ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಇದೇ ಪ್ರಥಮ ಬಾರಿಗೆ ಸಿದ್ದಾಪುರ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಅನುದಾನಗಳನ್ನು ವಿವಿಧ ಯೋಜನೆಗಳ ಮೂಲಕ ತರಲಾಗಿದ್ದು ಈಗಾಗಲೇ 70 ಲಕ್ಷಕ್ಕೂ ಹೆಚ್ಚು ಯೋಜನೆಯ ಕಾಮಗಾರಿಗಳನ್ನು ಗ್ರಾಮ ಪಂಚಾಯಿತಿ ಮೂಲಕ ಪೂರ್ಣಗೊಳಿಸಲಾಗಿದೆ
ರಸ್ತೆ ಅಭಿವೃದ್ಧಿ, ಡಾಮರೀಕರಣ, ಕುಡಿಯುವ ನೀರು, ತಡೆಗೋಡೆ, ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು ಇದೀಗ ಎರಡನೇ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಸಿದ್ದಾಪುರ ಕರಡಿಗೋಡು, ಕಣ್ಣಂಗಾಲ, ಪೈಸಾರಿಗೆ ರಸ್ತೆ, ಅವರೆಗುಂದ, ದುಬಾರೆ, ಕಕ್ಕಟ್ಟು ಕಾಡು ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವದಾಗಿ ತಿಳಿಸಿದ ಅವರು ಸರಕಾರದ ಯೋಜನೆಗಳನ್ನು ಗ್ರಾಮಸ್ಥರು ಸದ್ಭಳಕೆ ಮಾಡಿಕೊಂಡು ಮುಂದೆ ಬರಬೇಕೆಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ ಮಣಿ ಮಾತನಾಡಿ ಸಿದ್ದಾಪುರ ಗ್ರಾಮ ಪಂಚಾಯಿತಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಂದೂವರೆ ಕೋಟಿಗೂ ಹೆಚ್ಚು ವಿವಿಧ ಯೋಜನೆಗಳ ಅನುದಾನ ಗ್ರಾಮ ಪಂಚಾಯಿತಿಗೆ ಬಂದಿದ್ದು ಈಗಾU Àಲೇ ಶೇ. 70 ರಷ್ಟು ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿ¸ Àಲಾಗಿದೆ ಎರಡನೇ ಹಂತದ ಕಾಮಗಾರಿಗಳನ್ನು ಸದ್ಯದಲ್ಲೇ ಪೂರ್ಣಗೊಳಿಸಲಾಗುವದು. ಗ್ರಾಮ ಪಂಚಾಯಿತಿಗೆ ವಿವಿಧ ಯೋಜನೆ ಗಳಿಂದ ಹೆಚ್ಚು ಅನುದಾನ ತರುವಲ್ಲಿ ಶ್ರಮಿಸಿ ಅಭಿವೃದ್ಧಿ ಕಾಮಗಾರಿU Àಳಿಗೆ ಕೈಜೋಡಿಸಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಸರಿತಾ ಪೂಣಚ್ಚ ಆವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನೆ ಸಲ್ಲಿಸುತ್ತಿರುವದಾಗಿ ತಿಳಿಸಿದರು
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಾಜೇಶ್ವರಿ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪ್ರೇಮಾ,ಸುಶೀಲ, ಸರೋಜ, ಶಾರದಾ,ಪೂವಮ್ಮ, ದೇವಾಜಾನು, ಜಾಫರ್ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ. ಎಚ್. ಮೂಸ ಸೇರಿದಂತೆ ಮತ್ತಿತರರು ಇದ್ದರು.